
ಬೆಂಗಳೂರು: ಕರ್ನಾಟಕ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಬುಧವಾರ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಡಿಸೆಂಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಡಿಸೆಂಬರ್ 24 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. ಜನವರಿ 27 ರಿಂದ 30 ರವರೆಗೆ ಮುಖ್ಯ ಪರೀಕ್ಷೆ ನಡೆಯಲಿದೆ. ಮಾಹಿತಿಗಾಗಿ http://kpsc.jar.nic.in ಗಮನಿಸಬಹುದಾಗಿದೆ. ಅದೇ ರೀತಿ ಕೆಪಿಎಸ್ಸಿ ಮೂಲಕ ನಡೆಸಲಾದ ನೇಮಕಾತಿ ಪ್ರಕ್ರಿಯೆಗಳ ಸ್ಥಿತಿಗತಿಗಳ ಕುರಿತಾಗಿ ಎರಡನೇ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ ಎಂದು ಹೇಳಲಾಗಿದೆ.