ಬೆಂಗಳೂರು: ಪಶು ಸಂಗೋಪನಾ ಇಲಾಖೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 400 ಪಶು ವೈದ್ಯಾಧಿಕಾರಿಗಳ ಗ್ರೂಪ್ ಎ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಗಸ್ಟ್ 12 ರಿಂದ ಸೆಪ್ಟಂಬರ್ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ(ಬಿ.ವಿ.ಎಸ್ಸಿ) ಮತ್ತು ಪಶು ವೈದ್ಯಕೀಯ ವಿಜ್ಞಾನ ಮತ್ತು ಪಶು ವೈದ್ಯಕೀಯ ಸಂಶೋಧನೆ(ಬಿ.ವಿ.ಎಸ್ಸಿ ಮತ್ತು ಎಹೆಚ್) ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ ಮೊದಲಾದವುಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್ಸಿ ವೆಬ್ಸೈಟ್ ಗಮನಿಸಬಹುದಾಗಿದೆ.