ಬೆಂಗಳೂರು: ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಕುರಿತು ಆಕ್ಷೇಪಣೆ ಸಲ್ಲಿಕೆಯ ನಂತರ ತೀರ್ಮಾನ ಕೈಗೊಳ್ಳಲಾಗುವುದು. ಶೀಘ್ರವೇ ಕೆಎಎಸ್ ಮರು ಪರೀಕ್ಷೆಯ ಕೀ ಉತ್ತರ ಪ್ರಕಟಿಸುವ ಸಾಧ್ಯತೆ ಇದೆ.
ಕರ್ನಾಟಕ ಲೋಕಸೇವಾ ಆಯೋಗವು ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಿದರೆ ಮಾತ್ರ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕೃಪಾಂಕ ನೀಡುವ ಬಗ್ಗೆ ತೀರ್ಮಾನಿಸ ತೆಗೆದುಕೊಳ್ಳಲು ನಿರ್ಧರಿಸಿದೆ. ಸುಮಾರು 18 -19 ಪ್ರಶ್ನೆಗಳಲ್ಲಿ ಕನ್ನಡಕ್ಕೆ ಭಾಷಾಂತರ ಲೋಪ, ಅರ್ಥ, ವ್ಯಾಕರಣ ದೋಷಗಳನ್ನು ಅಭ್ಯರ್ಥಿಗಳು ಪತ್ತೆ ಮಾಡಿದ್ದು, ಅನೇಕ ಕಡೆ ಕನ್ನಡ ಪದಗಳನ್ನು ತಪ್ಪಾಗಿ ಬರೆಯಲಾಗಿದೆ. ಈ ಲೋಪಗಳ ಕುರಿತಾಗಿ ಲೋಕಸೇವಾ ಆಯೋಗ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಲಾಗಿದೆ.