
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.
ಡಿಸೆಂಬರ್ 16, 17ರಂದು ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಕಿರಿಯ ಲೆಕ್ಕ ಸಹಾಯಕರ 67 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಇವು ಉಳಿಕೆ ಮೂಲ ವೃಂದದ ಹುದ್ದೆಗಳಾಗಿವೆ.
ಡಿಸೆಂಬರ್ 30ರಂದು ಸಹಕಾರ ಸಂಘಗಳ ನಿರೀಕ್ಷಕರ ಕಲ್ಯಾಣ ಕರ್ನಾಟಕ ವೃಂದದ 53 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಕಳೆದ ಮಾರ್ಚ್ ನಲ್ಲಿ ಈ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಡಿಸೆಂಬರ್ 30ರಂದು ಬೆಳಗ್ಗೆ 10ರಿಂದ 11.30 ರವರೆಗೆ ಸಾಮಾನ್ಯ ಜ್ಞಾನ ಪತ್ರಿಕೆ, ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಸಾಮಾನ್ಯ ಕನ್ನಡ, ಇಂಗ್ಲಿಷ್, ಮತ್ತು ಕಂಪ್ಯೂಟರ್ ಜ್ಞಾನದ ಪರೀಕ್ಷೆ ನಡೆಯಲಿದೆ.
2024ರ ಜನವರಿ 6,7 ರಂದು ವಾಣಿಜ್ಯ ತೆರಿಗೆ ಇಲಾಖೆಯ ವಾಣಿಜ್ಯ ಪರಿವೀಕ್ಷಕರ 15 ಹುದ್ದೆಗಳಿಗೆ ಪರೀಕ್ಷೆ ನಿಗದಿಯಾಗಿದೆ. ಇವೆಲ್ಲವೂ ಗ್ರೂಪ್ ಸಿ ವೃಂದದ ಹುದ್ದೆಗಳಾಗಿವೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಮಾಹಿತಿ ನೀಡಿದ್ದಾರೆ.