ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಪರೀಕ್ಷೆ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ನಾನಾ ವೃಂದದ ಹುದ್ದೆಗಳ ನೇಮಕಾತಿಗಾಗಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಡಿಸೆಂಬರ್ 21 ರಿಂದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಸಮೂಹ ಎ ವೃಂದದ ಸಹಾಯಕ ನಿಯಂತ್ರಕ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಜನವರಿ 2 ರಿಂದ ಪತ್ರಾಂಕಿತ ಅಧಿಕಾರಿಗಳ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಡೆಯಲಿದೆ.
ಜನವರಿ 23 ರಂದು ರಾಜ್ಯದ ನಾನಾ ಇಲಾಖೆಗಳ ಮತ್ತು ದೆಹಲಿ ಕರ್ನಾಟಕ ಭವನದಲ್ಲಿ ಉಳಿಕೆ ಮೂಲ ವೃಂದ ಮತ್ತು ಹೈದರಾಬಾದ್-ಕರ್ನಾಟಕ ವೃಂದಕ್ಕೆ ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಕನ್ನಡ ಕಡ್ಡಾಯ ಪರೀಕ್ಷೆ ನಡೆಯಲಿದೆ. ಜನವರಿ 24 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಜನವರಿ 27 ರಿಂದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಎ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಡೆಯಲಿದೆ. ಫೆಬ್ರವರಿ 13 ರಂದು ನಾನಾ ಇಲಾಖೆಗಳ ಉಳಿಕೆ ಮೂಲ ವೃಂದ ಮತ್ತು ಹೈದರಾಬಾದ್ ಕರ್ನಾಟಕದ ಕಿರಿಯ ಸಹಾಯಕರು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕನ್ನಡ ಕಡ್ಡಾಯ ಪರೀಕ್ಷೆ, ಫೆಬ್ರವರಿ 14 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.