ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳ ಸಂಭವನೀಯ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳಿಗೆ ನವೆಂಬರ್ 11 ಭಾಷಾ ಪರೀಕ್ಷೆ ಮತ್ತು ನವೆಂಬರ್ 17ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಉಳಿಕೆ ಮೂಲ ವೃಂದದ 150 ಪಿಡಿಒ ಹುದ್ದೆಗಳಿಗೆ ಡಿಸೆಂಬರ್ 7 ಭಾಷಾ ಪರೀಕ್ಷೆ, ಡಿಸೆಂಬರ್ 8 ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಸೆಪ್ಟಂಬರ್ 14, 15 ರಂದು ಕನ್ನಡ ಭಾಷಾ ಪರೀಕ್ಷೆ, ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ಪತ್ರಿಕೆ ಪರೀಕ್ಷೆ ನಡೆಸಲಾಗುವುದು.