alex Certify ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

410 ಸಿ ದರ್ಜೆಯ ಹುದ್ದೆಗಳ ನೇಮಕಾತಿ ಸೇರಿದಂತೆ 4 ಇಲಾಖೆ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದ್ದು, ಈ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಆಯುಷ್ ಇಲಾಖೆಯ ಔಷಧ ವಿಶ್ಲೇಷಕರ ಹುದ್ದೆಗಳಿಗೆ ನ. 29 ಮತ್ತು 30 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ 136 ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಡಿ. 24 ಮತ್ತು 25 ರಂದು ಪರೀಕ್ಷೆ ನಡೆಯಲಿದೆ.

ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳ 410 ಹುದ್ದೆಗಳಿಗೆ 2023 ರ ಜ. 21 ಮತ್ತು 22 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಇಂಜಿನಿಯರ್ ಗಳ ಹುದ್ದೆಗಳಿಗೆ 2023 ರ ಫೆ. 11 ಮತ್ತು 12ರಂದು ಪರೀಕ್ಷೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...