
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಸೆಪ್ಟೆಂಬರ್ 18 ರಂದು ಎಸ್.ಡಿ.ಎ. ಹುದ್ದೆಗಳಿಗೆ ಕನ್ನಡ ಕಡ್ಡಾಯ ಪರೀಕ್ಷೆ ಮತ್ತು ಸೆಪ್ಟಂಬರ್ 19 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದೆ.
ಸೆಪ್ಟಂಬರ್ 19 ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಲೋಕಸೇವಾ ಆಯೋಗದ ವೆಬ್ಸೈಟ್ನಲ್ಲಿ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಕೆಪಿಸಿಸಿ ಕಾರ್ಯದರ್ಶಿ ಸತ್ಯವತಿ ತಿಳಿಸಿದ್ದಾರೆ. ತಾಂತ್ರಿಕ ಸಮಸ್ಯೆ ಉಂಟಾದಲ್ಲಿ ಸಹಾಯವಾಣಿ ಸಂಖ್ಯೆ 1800 572 8707 ಸಂಪರ್ಕಿಸಬಹುದು ಎಂದು ಹೇಳಲಾಗಿದೆ.