ಬೆಂಗಳೂರು: 1114 ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಎಫ್.ಡಿ.ಎ. ಪರೀಕ್ಷೆಯನ್ನು ಮುಂದೂಡಲಾಗಿದ್ದು, ಸದ್ಯದಲ್ಲೇ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗುವುದು.
ನಾಳೆ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಎಫ್ಡಿಎ ಪರೀಕ್ಷೆ ನಿಗದಿಯಾಗಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
1114 ಹುದ್ದೆಗಳಿಗೆ ನಾಳೆ ಪರೀಕ್ಷೆ ನಡೆಯಬೇಕಿತ್ತು. 3.94 ಲಕ್ಷ ಮಂದಿ ಪರೀಕ್ಷೆ ಕಟ್ಟಿದ್ದರು. ಆದರೆ, ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ ಎನ್ನಲಾಗಿದೆ.