ಬೆಂಗಳೂರು: ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯ ನಾಗರಿಕ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷ ಸಡಿಲಿಕೆ ಮಾಡಿ ಕರ್ನಾಟಕ ಲೋಕಸೇವಾ ಆಯೋಗ(KPSC) ಆದೇಶ ಹೊರಡಿಸಿದೆ.
ಈಗಾಗಲೇ ಹೊರಡಿಸಲಾದ ಅಧಿಸೂಚನೆಗಳಿಗೆ ಮತ್ತು ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಲ್ಲಿ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಸಾಮಾನ್ಯ ವರ್ಗಕ್ಕೆ 38 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಗರಿಷ್ಠ 41 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1ರ ಅಭ್ಯರ್ಥಿಗಳಿಗೆ 43 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ವಯೋಮಿತಿ ಸಡಿಲಿಕೆಯಿಂದ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ರಿಂದ 30 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.