ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಆನ್ಲೈನ್ ಮೂಲಕ ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಇಂಜಿನಿಯರ್ ಗಳು ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರು ಮತ್ತು 58 ಸಹಾಯಕ ಸಾಂಖ್ಯಿಕ ಅಧಿಕಾರಿ ಸೇರಿದಂತೆ 332 ಹುದ್ದೆಗಳ ಭರ್ತಿಗೆ ಮೂಲಕ ಅರ್ಜಿ ಆಹ್ವಾನಿಸಿದೆ.
ಜಲಸಂಪನ್ಮೂಲ ಇಲಾಖೆಯಲ್ಲಿ 166 ಸಿವಿಲ್, 3 ಮೆಕ್ಯಾನಿಕಲ್ ಹುದ್ದೆಗಳ ಬರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ 105 ನಿರೀಕ್ಷಕರ ಹುದ್ದೆಗಳು, 58 ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು. ಅ. 19 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ನ. 17 ಕೊನೆಯ ದಿನವಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ. ಕನ್ನಡ ಕಡ್ಡಾಯ ಪರೀಕ್ಷೆ ಬರೆಯಬೇಕಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ತೊಂದರೆ ಯಾದರಲ್ಲಿ 18005728707 ಸಂಪರ್ಕಿಸುಬಹುದಾಗಿದೆ.