ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ. ಅಲ್ಲದೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೂಡ ವಿಸ್ತರಿಸಲಾಗಿದೆ.
ಲೋಕಸಭೆ ಚುನಾವಣೆಯ ಕಾರಣ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಈ ಮೊದಲು ಅರ್ಜಿ ಸಲ್ಲಿಸಲು ಏಪ್ರಿಲ್ 3 ಕೊನೆಯ ದಿನವಾಗಿತ್ತು. ಅರ್ಜಿ ಸಲ್ಲಿಕೆ ಅವಧಿಯನ್ನು ಏಪ್ರಿಲ್ 15 ರವರೆಗೆ ಕರ್ನಾಟಕ ಲೋಕಸೇವಾ ಆಯೋಗ ವಿಸ್ತರಿಸಿದೆ. ಅಲ್ಲದೇ, ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು ಮೇ 5ಕ್ಕೆ ನಿಗದಿಪಡಿಸಲಾಗಿತ್ತು. ಈಗ ಜುಲೈ 7ಕ್ಕೆ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ.