ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ FDA(RPC)2019 ರ ಹುದ್ದೆಗೆ 2ನೇ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ತಿದ್ದುಪಡಿ ನಿಯಮಗಳನ್ವಯ ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 15 ಇಲಾಖೆಗಳಿಂದ ಪ್ರಸ್ತಾವನೆ ಸ್ವೀಕೃತವಾಗಿದ್ದು, ನಿಯಮಾನುಸಾರ ಶೇ.30ರ ವರ್ಗೀಕರಣಕ್ಕೆ ಸೀಮಿತಗೊಳಿಸಿ, ಪ್ರಸ್ತಾವನೆಗಳು ಸ್ವೀಕೃತವಾದ ಕಾಲಾನುಕ್ರಮದನುಸಾರ 34 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ, ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಿದೆ.
ಉಳಿಕೆ ಮೂಲ ವೃಂದದ 06 ವಿವಿಧ ಇಲಾಖೆಗಳಿಂದ ಹೆಚ್ಚುವರಿ ಆಯ್ಕೆಪಟ್ಟಿಗಾಗಿ ಪ್ರಸ್ತಾವನೆಗಳು ಸ್ವೀಕೃತವಾಗಿದ್ದು, ನಿಯಮಾನುಸಾರ ಶೇಕಡ 30ರ ವರ್ಗೀಕರಣಕ್ಕೆ ಸೀಮಿತಗೊಳಿಸಿ, ಪ್ರಸ್ತಾವನೆಗಳು ಸ್ವೀಕೃತವಾದ ಕಾಲಾನುಕ್ರಮಣಿಕೆಯನುಸಾರ ಉಳಿಕೆ ಮೂಲ ವೃಂದದ 06 ವಿವಿಧ ಇಲಾಖೆಗಳಿಗೆ 65 ಸಹಾಯಕರು/ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ, ಅಭ್ಯರ್ಥಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ.
2ನೇ ಹೆಚ್ಚುವರಿ ಆಯ್ಕೆಪಟ್ಟಿಯು ಉಚ್ಚ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.
https://www.facebook.com/photo/?fbid=3828375697380588&set=pcb.1978693265896358