ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) 7 ವರ್ಷಗಳ ನಂತರ ಕೆಎಎಸ್ ಗೆಜೆಟೆಡ್ ಪ್ರೊಬೇಷನರಿ(ಪತ್ರಾಂಕಿತ) ಅಧಿಕಾರಿಗಳ 384 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ.
ಕೆ.ಪಿ.ಎಸ್.ಸಿ. ಪ್ರಭಾರ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ ಅವರು ಅಧಿಸೂಚನೆ ಹೊರಡಿಸಿದ್ದು, ಮಾರ್ಚ್ 4ರಿಂದ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿಯ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ 300 ರೂಪಾಯಿ, ಮಾಜಿ ಸೈನಿಕರಿಗೆ 50 ರೂ. ಶುಲ್ಕವಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಮೇ 5ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
384 ಹುದ್ದೆಗಳಲ್ಲಿ ಗ್ರೂಪ್ ಎ 159 ಹುದ್ದೆಗಳು, ಗ್ರೂಪ್ ಬಿ 225 ಹುದ್ದೆಗಳು ಇವೆ
ಕನಿಷ್ಠ 21 ವರ್ಷ ಮೀರಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 38 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ 41 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ವಿವರಗಳಿಗೆ kpsc.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ.