alex Certify BIG NEWS: ಗ್ರೂಪ್- ಸಿ PDO ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ಅ. 3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರೂಪ್- ಸಿ PDO ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ: ಅ. 3ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ತಿದ್ದುಪಡಿ ಅಧಿಸೂಚನೆ ಹೊರಡಿಸಿದೆ.

ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು ಸಾಮಾನ್ಯ ಅರ್ಹತೆ- 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1. 40 ವರ್ಷಗಳು” ಎಂದು ನಿಗದಿಪಡಿಸಲಾಗಿತ್ತು.

ರಾಜ್ಯ ಸಿವಿಲ್‌ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ, ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ.”

ಸರ್ಕಾರದ ಆದೇಶದನ್ವಯ ಸದರಿ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ, ವಯೋಮಿತಿಯನ್ನು ಕೆಳಕಂಡಂತೆ ಮಾರ್ಪಾಡು ಮಾಡಲಾಗಿದೆ.

ವಯೋಮಿತಿ:

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:03.10.2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿ 18 ವರ್ಷ ಹೊಂದಿರಬೇಕು ಹಾಗೂ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.

ಸಾಮಾನ್ಯ ಅರ್ಹತೆ-ಗರಿಷ್ಠ 38 ವರ್ಷಗಳು,

ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ – ಗರಿಷ್ಠ 41 ವರ್ಷಗಳು

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1- ಗರಿಷ್ಟ 43 ವರ್ಷಗಳು

ಸರ್ಕಾರದ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ಗ್ರೂಪ್-ಸಿ ವೃಂದದ ‘ಪಂಚಾಯತಿ ಅಭಿವೃದ್ಧಿ ಅಧಿಕಾರಿ* ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ:18.09.2024 ರಿಂದ 03.10.2024ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿರುತ್ತದೆ.

ವಿಶೇಷ ಸೂಚನೆ:

ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.

ವಯೋಮಿತಿಯನ್ನು ಹೊರತುಪಡಿಸಿ ಉಳಿದಂತೆ, ಆಯೋಗದ ಅಧಿಸೂಚನೆ ಸಂಖ್ಯೆ:ಇ(2)598/2023-24/ಪಿಎಸ್‌ಸಿ, ದಿನಾಂಕ:15.03.2024ರಲ್ಲಿ ತಿಳಿಸಲಾಗಿರುವ ಮಾಹಿತಿ/ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಯನ್ನು ಓದಿಕೊಳ್ಳತಕ್ಕದ್ದು.

ಈಗಾಗಲೇ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್ ಕೆ. ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...