ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಪಿಡಿಒ ಹುದ್ದೆಗಳು ಮತ್ತು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಸೇರಿ 574 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಿದೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ 97 ಪಿಡಿಒ ಹುದ್ದೆಗಳು, ಉಳಿಕೆ ಮೂಲ ವೃಂದದಲ್ಲಿ 150 ಪಿಡಿಒ ಹುದ್ದೆಗಳಿಗೆ ಕೆಪಿಎಸ್ಸಿ ವತಿಯಿಂದ ನೇಮಕಾತಿ ನಡೆಸಲಾಗುತ್ತಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಿಬಿಎಂಪಿ, ಅಂತರ್ಜಲ ನಿರ್ದೇಶನಾಲಯ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮೇ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಗಳು, ಅರ್ಜಿ ಸಲ್ಲಿಕೆ, ವಯೋಮಿತಿ, ವಿದ್ಯಾರ್ಹತೆ ಮತ್ತಿತರ ಮಾಹಿತಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗಮನಿಸಬಹುದಾಗಿದೆ.