ಬೀದರ್: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 979 ಹುದ್ದೆಗಳ ಭರ್ತಿ ಮಾಡಲು ಕೆ.ಪಿ.ಎಸ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಇಲಾಖೆಯ 979 ಹುದ್ದೆಗಳ ಭರ್ತಿಗೆ ಕೆ.ಪಿ.ಎಸ್.ಸಿ.ಗೆ ಪ್ರಸ್ತಾವನೆ ಸಲ್ಲಿಸಿದ್ದು, ಎರಡು ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳು ಸೇರಿದಂತೆ 979 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದಲ್ಲಿ 84 ಲಕ್ಷಕ್ಕೂ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಶೇ. 51 ರಷ್ಟು ಬಿತ್ತನೆ ಕಾರ್ಯ ಮುಗಿದಿದೆ. ಉತ್ತಮ ಮಳೆಯ ಮುನ್ಸೂಚನೆ ಇದೆ ಎಂದು ಹೇಳಿದ್ದಾರೆ.