ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಜಿ ಆಹ್ವಾನಿಸಿದೆ.
ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ವೃಂದದ 42 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಸಿವಿಲ್ ಇಂಜಿನಿಯರಿಂಗ್, ಕನ್ಸ್ಟ್ರಕ್ಷನ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಮತ್ತು ತತ್ಸಂಬಂಧಿತ ವಿಷಯಗಳಲ್ಲಿ ಪದವಿ ಪಡೆದ ಅರ್ಹರು ಅಕ್ಟೋಬರ್ 3ರಿಂದ ನವೆಂಬರ್ 4ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ 83,700 ರೂ.ನಿಂದ 12,55,200 ರೂ. ಇದೆ. ಈ ಕುರಿತಾದ ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗಮನಿಸಬಹುದಾಗಿದೆ.