alex Certify ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು(KPSC) ಕರ್ನಾಟಕ ನಾಗರೀಕ ಸೇವಾ(ನೇರ ನೇಮಕಾತಿ) ನಿಯಮಗಳನ್ವಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ನಗರ ಯೋಜಕರು 23 ಹುದ್ದೆಗಳು, ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರ 8 ಹುದ್ದೆ, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರ 2 ಹುದ್ದೆ ಸೇರಿದಂತೆ 33 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಾರ್ಚ್ 29 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 28 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 29 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಆಯೋಗದ ವೆಬ್ ಸೈಟ್ http://kpsc.kar.nic.in ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...