ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಸಂದರ್ಶನದ ಅಂಕಗಳನ್ನು 25 ಕ್ಕೆ ಇಳಿಕೆ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಪರೀಕ್ಷೆ ಸಂದರ್ಶನದ ಸಂದರ್ಭದಲ್ಲಿ ಪಕ್ಷಪಾತ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಸುಧಾರಣೆ ತರಲು ತೀರ್ಮಾನಿಸಲಾಗಿದೆ. ನೇಮಕಾತಿ ನಿಯಮ ತಿದ್ದುಪಡಿಗೆ ಸರ್ಕಾರ ನಿರ್ಧರಿಸಿದ್ದು, ಸಂದರ್ಶನ ಅಂಕಗಳನ್ನು 50 ರಿಂದ 25 ಕ್ಕೆ ಇಳಿಕೆ ಮಾಡಲಾಗುವುದು ಎಂದು ಹೇಳಲಾಗಿದೆ.
ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳಿಗೆ ಅನ್ಯಾಯ ತಡೆಯಲು, ಭಷ್ಟಾಚಾರಕ್ಕೆ ಕಡಿವಾಣ ಹಾಕಲು ಸಂದರ್ಶನದಲ್ಲಿ ನೀಡುವ ಅಂಕಗಳನ್ನು ಕಡಿತಗೊಳಿಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.