ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನೇಮಕಾತಿಗೆ ಹೊಸ ವಿಧಾನ ಅಳವಡಿಸಿಕೊಳ್ಳಲು ಮುಂದಾಗಿದೆ.
ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಮುಂದಾಗಿದ್ದು, ಜೆಎಸ್ಎಸ್, ಜಿಮ್ಯಾಟ್ ಮಾದರಿಯಲ್ಲಿ ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಕೆ.ಪಿ.ಎಸ್.ಸಿ.ಯಿಂದ ವರ್ಷಕ್ಕೆ ಎರಡು ಬಾರಿ ಪರೀಕ್ಷೆ ನಡೆಸಲಾಗುವುದು. ವಿವಿಧ ಇಲಾಖೆಗಳಿಗೆ ನೇರ ನೇಮಕಾತಿಗೆ ಅವಕಾಶ ಕಲ್ಪಿಸಲಾಗುವುದು. ಕುರಿತಂತೆ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ.
ವರ್ಷಕ್ಕೆ ಎರಡು ಸಲ ಅರ್ಹತಾ ಪರೀಕ್ಷೆಯನ್ನು ನಡೆಸಲಿದ್ದು, ಅಭ್ಯರ್ಥಿಗಳ ಜೇಷ್ಠತೆ ಅನುಸಾರ ರ್ಯಾಂಕಿಂಗ್ ನೀಡಲಾಗುತ್ತದೆ. ರ್ಯಾಂಕಿಂಗ್ ಅನುಸಾರ ವಿವಿಧ ಇಲಾಖೆಗಳು ತಮಗೆ ಅಗತ್ಯವಿರುವಷ್ಟು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬಹುದಾಗಿದೆ.
ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಬೇಡಿಕೆ ಇರುವುದರಿಂದ ನೇಮಕಾತಿಗೆ ಹೊಸವಿಧಾನ ರೂಪಿಸಲಾಗುತ್ತಿದೆ. ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಸುಮಾರು 2.5 ಲಕ್ಷ ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ ಶೇಕಡ 60 ಕ್ಕಿಂತ ಹೆಚ್ಚಿನ ಹುದ್ದೆಗಳು ಗ್ರೂಪ್ ಸಿ ಹುದ್ದೆಗಳಾಗಿವೆ. ಈ ಹುದ್ದೆಗಳ ನೇಮಕಾತಿಗೆ ವರ್ಷಕ್ಕೆ ಎರಡು ಬಾರಿ ಪರೀಕ್ಷೆ ನಡೆಸಲಾಗುವುದು ಎನ್ನಲಾಗಿದೆ.