
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ಮಾರ್ಚ್ 2 ಮತ್ತು 4ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಿದೆ.
ಕಲ್ಯಾಣ ಕರ್ನಾಟಕ ವೃಂದದಲ್ಲಿ ಅಧಿಸೂಚಿಸಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪತ್ರಾಂಕಿತ ವ್ಯವಸ್ಥಾಪಕರು, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಹುದ್ದೆಗಳಿಗೆ ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮಾರ್ಚ್ 2ರಂದು ಹಾಗೂ ಬಿಬಿಎಂಪಿ ಸಹಾಯಕ ಇಂಜಿನಿಯರ್(ಸಿವಿಲ್) ಹುದ್ದೆಗಳಿಗೆ ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮಾರ್ಚ್ 4ರಂದು ನಡೆಸಲಿದೆ.
ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದ್ದು, ಅರ್ಹ ಅಭ್ಯರ್ಥಿಗಳು ಪ್ರವೇಶ ಡೌನ್ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಪರೀಕ್ಷೆಗೆ ಹಾಜರಾಗುವಂತೆ ಕೆಪಿಎಸ್ಸಿ ಕಾರ್ಯದರ್ಶಿ ತಿಳಿಸಿದ್ದಾರೆ.