alex Certify FDA, SDA ನೇಮಕಾತಿ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

FDA, SDA ನೇಮಕಾತಿ: ಅಭ್ಯರ್ಥಿಗಳಿಗೆ KPSC ಮುಖ್ಯ ಮಾಹಿತಿ

ಬೆಂಗಳೂರು: ವಿವಿಧ ಇಲಾಖೆಗಳು ಮತ್ತು ದೆಹಲಿ ಕರ್ನಾಟಕ ಭವನದಲ್ಲಿ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್ ಕರ್ನಾಟಕದ ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ ನಡೆಯಲಿದೆ.

ಜನವರಿ 23, 24 ರಂದು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಕೆಪಿಎಸ್ಸಿ ವೆಬ್ಸೈಟ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ದಿನದವರೆಗೆ ಕಾಯದೆ ಮೊದಲೇ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು. ಪರೀಕ್ಷೆ ಉಪಕೇಂದ್ರವನ್ನು ಮೊದಲೇ ನೋಡಿಕೊಳ್ಳಬೇಕೆಂದು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಎಫ್.ಡಿ.ಎ., ಎಸ್.ಡಿ.ಎ. ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕ, ಮೀಸಲಾತಿ ಆಧಾರದಲ್ಲಿ ಪಾರದರ್ಶಕವಾಗಿ ನಡೆಯುತ್ತದೆ. ಕೆಲಸ ಕೊಡಿಸುವುದಾಗಿ ಆಶ್ವಾಸನೆ ನೀಡುವ ಮಧ್ಯವರ್ತಿಗಳ ಮಾತಿಗೆ ಅಭ್ಯರ್ಥಿಗಳು ಮೋಸ ಹೋಗಬಾರದು ಎಂದು ಸೂಚನೆ ನೀಡಲಾಗಿದ್ದು, ಕೆಪಿಎಸ್ಸಿ ಸಹಾಯವಾಣಿ 080 223356487, 22268356 ಕರೆ ಮಾಡಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...