alex Certify ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್

 ಬೆಂಗಳೂರು: ಜಾತಕ ಪಕ್ಷಿಗಳಂತೆ ಫಲಿತಾಂಶಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. 2017ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಲಾಗಿದ್ದ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಕೆ.ಪಿ.ಎಸ್.ಸಿ. . ಗುರುವಾರ ಪ್ರಕಟಿಸಿದೆ. ಸೋಮವಾರವಷ್ಟೇ ಅಭ್ಯರ್ಥಿಗಳು ಕೆ.ಪಿ.ಎಸ್.ಸಿ. ಎದುರು ಪ್ರತಿಭಟನೆ ನಡೆಸಿದ್ದರು.

1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ಲೋಕಸೇವಾ ಆಯೋಗದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ನಂತರ ಸಂದರ್ಶನ ನಡೆಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು.

2021 ರ ಫೆಬ್ರವರಿ 13 ರಿಂದ 16 ರವರೆಗೆ ನಡೆದ ಮುಖ್ಯ ಪರೀಕ್ಷೆ ನಡೆದಿತ್ತು. 20,120 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 106 ಹುದ್ದೆಗಳ ನೇಮಕಾತಿಗೆ 1,65,258 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯದ 10 ಪ್ರಮುಖ ನಗರಗಳ 430 ಕೇಂದ್ರಗಳಲ್ಲಿ 2020ರ ಆಗಸ್ಟ್ 24ರಂದು ಪೂರ್ವಭಾವಿ ಪರೀಕ್ಷೆ ನಡೆದಿದ್ದು, 83,716 ಅಭ್ಯರ್ಥಿಗಳು ಹಾಜರಾಗಿದ್ದರು.

ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:20 ಅನುಪಾತದಲ್ಲಿ 20,120 ಅಭ್ಯರ್ಥಿಗಳು ಆಯ್ಕೆಯಾಗಿ ಮುಖ್ಯ ಪರೀಕ್ಷೆ ಬರೆದಿದ್ದರು. ಒಂದೂವರೆ ವರ್ಷದಿಂದ ಸುಮಾರು 3 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...