ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ನಡೆಸಲಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಆಯ್ಕೆ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು 13 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯ ಸಹಾಯಕ ನಗರ ಯೋಜಕರು 60 ಹುದ್ದೆಗಳು, ಪೌರಾಡಳಿತ ನಿರ್ದೇಶನಾಲಯದ ಕಿರಿಯ ಅಭಿಯಂತರರು 89 ಹುದ್ದೆಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕರ 201 ಹುದ್ದೆಗಳ ಆಯ್ಕೆ ಪಟ್ಟಿಯನ್ನು ಆಯೋಗದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.