alex Certify ʻKPSCʼ ಯಿಂದ ಡಿ.16, 17 ರಂದು ವಿವಿಧ ಇಲಾಖೆಗಳ ನೇಮಕಾತಿಗೆ ಸ್ಪರ್ಧಾತ್ಮಾಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʻKPSCʼ ಯಿಂದ ಡಿ.16, 17 ರಂದು ವಿವಿಧ ಇಲಾಖೆಗಳ ನೇಮಕಾತಿಗೆ ಸ್ಪರ್ಧಾತ್ಮಾಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 16 ಮತ್ತು 17 ರಂದು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವ ಮೂಲಕ ಸುಗಮವಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ.

ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತ್ತು ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‍ಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರು ಮೊಬೈಲ್ ಬಳಸಬಾರದು ಎಂದು ಸೂಚನೆ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...