alex Certify KPSC ಸದಸ್ಯರ ಹುದ್ದೆಗೆ ಮೂವರ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KPSC ಸದಸ್ಯರ ಹುದ್ದೆಗೆ ಮೂವರ ಹೆಸರು ಶಿಫಾರಸು ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC)ಕ್ಕೆ ಮೂವರು ಸದಸ್ಯರ ಹೆಸರನ್ನು ಸಿಎಂ ಸಿದ್ದರಾಮಯ್ಯ ಶಿಫಾರಸು ಮಾಡಿದ್ದಾರೆ.

ಕೆ.ಪಿ.ಎಸ್.ಸಿ ಅಧ್ಯಕ್ಷಕರು, ಉಪಾಧ್ಯಕ್ಷರು, ಸದಸ್ಯರ ನೇಮಕಾತಿಯಲ್ಲಿ ಸಂಪೂರ್ಣವಾಗಿ ಪಾರದರ್ಶಕತೆ ಕಾಯ್ದುಕೊಳ್ಳುವಂತೆ ಇತ್ತೀಚೆಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಈ ಹಿನ್ನೆಲೆಯಲ್ಲಿ ಕೆ.ಪಿ.ಎಸ್.ಸಿ ಸದಸ್ಯರ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಬೀದರ್ ನ ಬಸವರಾಜ್ ಮಲ್ಗೆ, ಬೆಂಗಳೂರಿನ ಡಾ.ಆರ್.ಕಾವಾಲಮ್ಮ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್ ಹೆಚ್.ಎಸ್.ಭೋಜ್ಯ ನಾಯ್ಕ್ ಅವರ ಹೆಸರನ್ನು ಸಿಎಂ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...