ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ KAS ಮುಖ್ಯ ಪರೀಕ್ಷೆಯನ್ನ ಮಾ.28 ರಿಂದ ನಡೆಸಲು ನಿರ್ಧರಿಸಲಾಗಿತ್ತು, ಈಗ ಈ ಪರೀಕ್ಷೆಯನ್ನು ಮುಂದೂಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಅಧಿಸೂಚನೆಯನ್ನು ದಿನಾಂಕ: 13-02-2025ರಂದು ಪ್ರಕಟಿಸಲಾಗಿತ್ತು.
ಮುಖ್ಯ ಪರೀಕ್ಷೆಯನ್ನು ದಿನಾಂಕ 28-03-2025, 29-03-2025, 01-04-2025 , 02-04-2025ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಸದರಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದ್ದು, ಪ್ರಕಟಿಸಲಾಗುವುದು, ಆಯೋಗದ ಅಂತರ್ಜಾಲದಲ್ಲಿ ಶೀಘ್ರವಾಗಿ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದೆ.
