ಕೆಪಿಟಿಸಿಎಲ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆಗಸ್ಟ್ 7 ರಂದು ಈ ಪರೀಕ್ಷೆಯನ್ನು ನಡೆಸುತ್ತಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆ ವೇಳೆ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದ ನಂತರ ಪ್ರತಿ ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ಹೀಗಾಗಿ ಕೆಪಿಟಿಸಿಎಲ್ ಪರೀಕ್ಷೆಯಲ್ಲೂ ಸಹ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಬರುವಾಗ ವಾಚ್, ಮೊಬೈಲ್ ಸೇರಿ ಯಾವುದೇ ಎಲೆಕ್ಟ್ರಾನಿಕ್ ಉಪಕರಣ ತರುವುದು. ಆಭರಣ ಹಾಗೂ ಶೂ ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಅಲ್ಲದೆ ಡ್ರೆಸ್ ಕೋಡ್ ಸಹ ನಿಗದಿಪಡಿಸಲಾಗಿದ್ದು, ಪೂರ್ಣ ತೋಳಿನ ಶರ್ಟ್ ಧರಿಸುವಂತಿಲ್ಲ ಜೊತೆಗೆ ಕುರ್ತಾ, ಪೈಜಾಮಾಕ್ಕೂ ಅವಕಾಶವಿರುವುದಿಲ್ಲ. ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬಟನ್ ಹೊಂದಿರುವ ಡ್ರೆಸ್ ಗಳನ್ನು ಧರಿಸುವಂತಿಲ್ಲ. ಹಾಗೂ ಅಭ್ಯರ್ಥಿಗಳು ಎನ್ 95 ಮಾಸ್ಕ್ ಅನ್ನು ಧರಿಸಬೇಕಾಗಿರುತ್ತದೆ.