alex Certify ಕೆಪಿಟಿಸಿಎಲ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್: 31 ಸಾವಿರ ಅರ್ಜಿ ತಿರಸ್ಕೃತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಪಿಟಿಸಿಎಲ್ ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಶಾಕ್: 31 ಸಾವಿರ ಅರ್ಜಿ ತಿರಸ್ಕೃತ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್, ಸಹಾಯಕ ಇಂಜಿನಿಯರ್, ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷೆಗೆ ಸಲ್ಲಿಕೆಯಾಗಿರುವ ಒಟ್ಟು ಅರ್ಜಿಗಳಲ್ಲಿ 30,933 ಅರ್ಜಿಗಳು ತಿರಸ್ಕೃತಗೊಂಡಿವೆ.

1,492 ವಿವಿಧ ಹುದ್ದೆಗಳ ನೇಮಕಾತಿಗೆ ಪರೀಕ್ಷೆಗೆ 3,97,315 ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಪರೀಕ್ಷೆ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ಅರ್ಜಿಗಳು ಕೂಡ ತಿರಸ್ಕೃತಗೊಂಡಿವೆ. ಪ್ರತಿ ಅರ್ಜಿಗೆ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳು 600 ಮತ್ತು 300 ಶುಲ್ಕ ಪಾವತಿಸಿದ್ದು, ಅರ್ಜಿ ತಿರಸ್ಕೃತಗೊಂಡವರ ಶುಲ್ಕವನ್ನು ವಾಪಸ್ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಜುಲೈ 23, 24ರಂದು ಜೂನಿಯರ್ ಇಂಜಿನಿಯರ್, ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಕಿರಿಯ ಸಹಾಯಕರ ಹುದ್ದೆಗೆ ಆಗಸ್ಟ್ 7 ರಂದು ಕೆಇಎ ಪರೀಕ್ಷೆ ನಡೆಸಲಿದೆ. ಕನ್ನಡ ಮಾಧ್ಯಮ, ಕಲ್ಯಾಣ ಕರ್ನಾಟಕ, ಜಾತಿ ಪ್ರಮಾಣ ಪತ್ರ, ಮಾಜಿ ಸೈನಿಕರ ಪ್ರಮಾಣ ಪತ್ರ, ವಿಕಲಚೇತನರ ಪ್ರಮಾಣ ಪತ್ರ ಹೀಗೆ ವಿವಿಧ ರೀತಿಯ ಮೀಸಲು ಹಾಗೂ ಇತರೆ ಪ್ರಮಾಣ ಪತ್ರಗಳನ್ನು ಅಪ್ಲೋಡ್ ಮಾಡಿಲ್ಲ. ಇಂತಹ ಅಭ್ಯರ್ಥಿಗಳನ್ನು ಸಾಮಾನ್ಯ ವರ್ಗಕ್ಕೆ ಪರಿಗಣಿಸಲು ಸಾಧ್ಯವಾಗಿಲ್ಲವೆನ್ನುವ ಕಾರಣ ನೀಡಿ 31,933 ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...