
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ದೇವಸಂದ್ರದ ಮೊಹಮ್ಮದ್ ಅಜೀಮುದ್ದೀನ್ ಬಂಧಿತ ಆರೋಪಿ. ಅಕ್ರಮಕ್ಕೆ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಈತನನ್ನು ಬಂಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಸಂಜು ಭಂಡಾರಿ ಹಾಗೂ ಇತರೆ ಆರೋಪಿಗಳಿಗೆ ಈತ ಎಲೆಕ್ಟ್ರಾನಿಕ್ ಡಿವೈಸ್ ಪೂರೈಕೆ ಮಾಡಿದ್ದ. ಇಂತಹ ಡಿವೈಸ್ ಗಳನ್ನು ಅಳವಡಿಸಿದ್ದ ಎನ್ -95 ಮಾಸ್ಕ್ ಗಳು, ಬನಿಯನ್, ಇಯರ್ ಪೀಸ್, ವಿವಿಧ ರೀತಿಯ ಚಾರ್ಜಿಂಗ್ ಕೇಬಲ್, ವಾಕಿ ಟಾಕಿಗಳನ್ನು ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಹೇಳಲಾಗಿದೆ.