
ಬೆಂಗಳೂರು: 533 ಇಂಜಿನಿಯರ್ ಹುದ್ದೆಗಳು ಸೇರಿದಂತೆ ಒಟ್ಟು 1492 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ನೇಮಕಾತಿ ಆರಂಭಿಸಿದೆ.
ಕೆಪಿಟಿಸಿಎಲ್ ಮತ್ತು ವಿದ್ಯುತ್ ಸರಬರಾಜು ನಿಗಮಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡಲು ನೇಮಕಾತಿ ಕೈಗೊಳ್ಳಲಾಗಿದ್ದು, ಫೆಬ್ರವರಿ 7 ರಿಂದ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
2019 ರ ನಂತರ ನೇಮಕಾತಿ ನಡೆದಿರಲಿಲ್ಲ. ಎಂಜಿನಿಯರಿಂಗ್ ಪದವೀಧರರು ಸೇರಿದಂತೆ ಉದ್ಯೋಗಾಕಾಂಕ್ಷಿಗಳು ಕಳೆದ ಎರಡು ವರ್ಷಗಳಿಂದ ನೇಮಕಾತಿ ನಿರೀಕ್ಷೆಯಲ್ಲಿದ್ದರು. ಈಗ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿನ 533 ಇಂಜಿನಿಯರ್ ಸೇರಿದಂತೆ 1492 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 7ರಿಂದ ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿದೆ.