ಬೆಂಗಳೂರು: ಕೆಪಿಟಿಸಿಎಲ್ ನಲ್ಲಿ 599 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಬಿಟೆಕ್, ಡಿಪ್ಲೋಮಾ ಓದಿದವರಿಗೆ ಉದ್ಯೋಗಾವಕಾಶ ಇದೆ.
ಜೂನಿಯರ್ ಇಂಜಿನಿಯರ್(ಸಿವಿಲ್) 29, ಜೂನಿಯರ್ ಇಂಜಿನಿಯರ್(ಎಲೆಕ್ಟ್ರಿಕ್) 570 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್ ನಿಂದ ಕಡ್ಡಾಯವಾಗಿ ಬಿಇ, ಬಿಟೆಕ್, ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ಎಲೆಕ್ಟ್ರಿಕ್ ಇಂಜಿನಿಯರ್ ಹುದ್ದೆಗಳಿಗೆ ಎಲೆಕ್ಟ್ರಿಕಲ್ ನಲ್ಲಿ ಡಿಪ್ಲೋಮಾ, ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಬೇಕು. ವೇತನಶ್ರೇಣಿ 26,270 ರೂ.ನಿಂದ 65,020 ರೂ. ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 350 ರೂ., ಸಾಮಾನ್ಯ, ಪ್ರವರ್ಗ-1, ಪ್ರವರ್ಗ-2 ಎ, 2ಬಿ, 3 ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕವಿದೆ. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಶುಲ್ಕ ಪಾವತಿಗೆ ಮಾರ್ಚ್ 9 ಕೊನೆಯ ದಿನವಾಗಿದೆ. ವಿವರಗಳಿಗಾಗಿ kptcl.karnataka.gov.in ಗಮನಿಸಬಹುದಾಗಿದೆ.