alex Certify KPTCL ಪರೀಕ್ಷೆಯಲ್ಲಿ ಅಕ್ರಮ: ಬಂಧಿತರ ಸಂಖ್ಯೆ 34 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KPTCL ಪರೀಕ್ಷೆಯಲ್ಲಿ ಅಕ್ರಮ: ಬಂಧಿತರ ಸಂಖ್ಯೆ 34 ಕ್ಕೆ ಏರಿಕೆ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಬೆಳಗಾವಿ ಜಿಲ್ಲೆ ಗೋಕಾಕ್ ಶಹರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಸಪ್ಲೈ ಮಾಡಿದ್ದ ಬಾಳೇಶ್ ಎಂಬುವನನ್ನು ಬಂಧಿಸಲಾಗಿದೆ. ಮೂಡಲಗಿ ತಾಲೂಕಿನ ರಾಜಾಪುರ ನಿವಾಸಿಯಾಗಿರುವ ಬಾಳೇಶ್ ಕಟ್ಟಿಕಾರ್ ನನ್ನು ಬಂಧಿಸಲಾಗಿದೆ.

2022ರ ಆಗಸ್ಟ್ 7ರಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಗೆ ಪರೀಕ್ಷೆ ನಡೆದಿತ್ತು. ಗೋಕಾಕ್ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದಲ್ಲಿ ಇದುವರೆಗೂ ಬಂಧಿತ ಆರೋಪಿಗಳ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...