
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(ಕೆಪಿಟಿಸಿಎಲ್) 902 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ.
ಮಾರ್ಚ್ ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ವಿದ್ಯುತ್ ಸಹಾಯಕ ಇಂಜಿನಿಯರ್ ಗಳು, 17 ಸಿವಿಲ್ ಸಹಾಯಕ ಇಂಜಿನಿಯರ್ ಗಳು, 15 ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಲಾಗಿದೆ.
535 ಅಭ್ಯರ್ಥಿಗಳಲ್ಲಿ 502 ಕಿರಿಯ ಇಂಜಿನಿಯರ್ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಇವರಲ್ಲಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದಾರೆ. 429 ಅಭ್ಯರ್ಥಿಗಳು ಇತರೆ ವೃಂದದವರಾಗಿದ್ದಾರೆ.
360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಮೇ 24 ಕೊನೆಯ ದಿನವಾಗಿದ್ದು, ಆಕ್ಷೇಪಣೆ ಸ್ವೀಕರಿಸಿ ಪರಿಶೀಲಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ಎಲ್ಲಾ ಅಭ್ಯರ್ಥಿಗಳ ವಿದ್ಯಾರ್ಹತೆ, ಮೀಸಲಾತಿ ಕೋರಿದ ದಾಖಲೆಗಳ ಬಗ್ಗೆ ಪ್ರಾಧಿಕಾರದಿಂದ ದೃಢೀಕರಣ ಪಡೆದು ಸ್ಥಳ ನಿಯಕ್ತಿ ಮಾಡಿ ನೇಮಕಾತಿ ಆದೇಶ ನೀಡಲಾಗುವುದು ಎನ್ನಲಾಗಿದೆ.