ಬೆಂಗಳೂರು: 2021-22ರಲ್ಲಿ ನಡೆದಿದ್ದ 1500 ಸಹಾಯಕ ಇಂಜಿನಿಯರ್ ನೇಮಕಾತಿ (ಕೆಪಿಟಿಸಿಎಲ್) ಪರೀಕ್ಷೆಯಲ್ಲಿ ಆಯ್ಕೆಯಾದರೂ ನೇಮಕಾತಿ ವಿಳಂಬವಾಗುತ್ತಿದ್ದು, ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾದ ಇಬ್ಬರು ಅಭ್ಯರ್ಥಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಕೆಪಿಟಿಸಿಎಲ್ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ನೇಮಕಾತಿಗೆ ಇರುವ ಟೆಕ್ನಿಕಲ್ ಸಮಸ್ಯೆ ಸರಿಪಡಿಸಿ ಡಿಸೆಂಬರ್ ಅಂತ್ಯದೊಳಗೆ ಲಿಸ್ಟ್ ಹೊರಡಿಸುವಂತೆ ಕೋರ್ಟ್ ಆದೇಶ ನೀಡಿದರೂ ಈವರೆಗೂ ಯಾವುದೇ ಪ್ರಕ್ರಿಯೆ ನಡೆಸುತ್ತಿಲ್ಲ ಎಂದು ಕೆಪಿಟಿಸಿಎಲ್ ವಿರುದ್ಧ ನೊಂದ ಅಭ್ಯರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಡಿಸೆಂಬರ್ ಅಂತ್ಯದೊಳಗೆ ಪಟ್ಟಿ ಬಿಡುಗಡೆ ಮಾಡಲಾಗುವುದು ಹಾಗೂ 2024ರ ಜನವರಿ 15ರೊಳಗೆ ಆಯ್ಕೆ ಮಾಡುವುದಾಗಿ ಕೆಪಿಟಿಎಲ್ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಸದ್ಯ ಪ್ರತಿಭಟನೆ ಹಿಂಪಡೆಯಲಾಗಿದೆ.