alex Certify BREAKING: ಲಂಚ ಸ್ವೀಕರಿಸುತ್ತಿದ್ದ ಪಿಐ, ಪಿಎಸ್ಐ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಂಚ ಸ್ವೀಕರಿಸುತ್ತಿದ್ದ ಪಿಐ, ಪಿಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಪಿಐ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಿಐ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಬಲೆಗೆ ಬಿದ್ದವರು. ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಆರೋಪಿಯ ಬಿಡುಗಡೆಗಾಗಿ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಜ್ರಮುನಿ, ಪಿಎಸ್ಐ ರಮ್ಯಾ ಅವರು ಲಂಚ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲು 50,000 ರೂ. ಲಂಚ ಪಡೆದುಕೊಂಡಿದ್ದರು. ಇವತ್ತು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...