ಶಿವಮೊಗ್ಗ ತಾಲ್ಲೂಕು ಹಾರನಹಳ್ಳಿ ಶ್ರೀ ಕ್ಷೇತ್ರ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಚೌಕಿಮಠ ದಲ್ಲಿ ಹಮ್ಮಿಕೊಂಡಿದ್ದ ಹರಪುರಧೀಶನ ದೀಪೋತ್ಸವ ಕಾರ್ಯಕ್ರಮದಲ್ಲಿ ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತ ಕ್ರಾಂತಿದೀಪ ಎನ್. ಮಂಜುನಾಥ್‌ರಿಗೆ ಗುರುರಕ್ಷೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬೆಕ್ಕಿನ ಕಲ್ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹಾರನಹಳ್ಳಿ ಚೌಕಿಮಠದ ಶ್ರೀ ನೀಲಕಂಠ ಮಹಾಸ್ವಾಮೀಜಿ, ಗುತ್ತಲ ಶ್ರೀ ಕಲ್ಮಠದ ಶ್ರೀ ಪ್ರಭು ಕುಮಾರ ಮಹಾಸ್ವಾಮಿಗಳು, ತಾಳಗುಪ್ಪ ಕೂಡ್ಲಿಮಠದ ಶ್ರೀ ಸಿದ್ದವೀರ ಮಹಾಸ್ವಾಮಿಗಳು, ಗೊಗ್ಗೆಹಳ್ಳಿ ಶ್ರೀ ಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಮೂಡಿ ವಿರಕ್ತ ಮಠದ ಶ್ರೀ ಸದಾಶಿವ ಮಹಾಸ್ವಾಮಿಗಳು, ಜೆಎ ಹಿರೇಮಠದ ಶ್ರೀ ಡಾ. ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕ್ಯಾಸನೂರು ಶ್ರೀ ವಿಜಯಕುಮಾರ ದೇಶಿಕರು, ಮಾಜಿ ಶಾಸಕ ಅಶೋಕ್‌ನಾಯ್ಕ, ಬಿಜೆಪಿ ಮುಖಂಡ ಟಿ.ಬಿ. ಜಗದೀಶ್ ಉಪಸ್ಥಿತರಿದ್ದರು.