ವಿಜಯಪುರ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಫೆ.4ರಂದು ಕ್ರಾಂತಿವೀರ ಬ್ರಿಗೆಡ್ ಉದ್ಘಾಟನೆ ಮಾಡುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ.
ವಿಜಯಪುರದಲ್ಲಿ ಮಾತನಡಿದ ಕೆ.ಎಸ್.ಈಶ್ವರಪ್ಪ, 10008 ಸಾಧು-ಸಂತ್ರ ಪಾದಪೂಜೆ ಮೂಲಕ ಬ್ರಿಗೇಡ್ ಉದ್ಘಾಟನೆ ಮಾಡಲಾಗುವುದು. 1 ಲಕ್ಷ ಜನರು ಸೇರುವ ವಿಶ್ವಾಸವಿದೆ.
ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟಿಸಲಿದ್ದಾರೆ. ಜನವರಿ 12ರಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ. ಪ್ರವಾಸದ ಮೂಲಕ ಬ್ರಿಗೇಡ್ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು.