ಬೆಂಗಳೂರು: ‘ಕೃಷಿ ಭಾಗ್ಯ ಯೋಜನೆ’ಯನ್ನು ಪುನಾರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್, ಕೃಷಿ ಭಾಗ್ಯ ಯೋಜನೆ ಮತ್ತೆ ಆರಂಭಿಸಲಾಗುವುದು. 2023 -24 ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕಿನಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಜಾರಿಗೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕೃಷಿ ಭಾಗ್ಯ ಯೋಜನೆ ಮತ್ತೆ ಪ್ರಾರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ಕೃಷಿ ಭಾಗ್ಯ ಯೋಜನೆಯನ್ನು 24 ಜಿಲ್ಲೆಗಳಲ್ಲಿ ಆರಂಭಿಸಲಾಗುವುದು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ನಿವೃತ್ತಿ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಕಾತಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ಮುಖ್ಯಮಂತ್ರಿಗಳಿಗೆ ಕ್ಯಾಬಿನೆಟ್ ಪರಮಾಧಿಕಾರ ನೀಡಿದೆ ಎಂದು ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.