alex Certify BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ‘ಕೃಷಿ ಭಾಗ್ಯ ಯೋಜನೆ’ ಪುನಾರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ‘ಕೃಷಿ ಭಾಗ್ಯ ಯೋಜನೆ’ ಪುನಾರಂಭ

ಬೆಂಗಳೂರು: ‘ಕೃಷಿ ಭಾಗ್ಯ ಯೋಜನೆ’ಯನ್ನು ಪುನಾರಂಭಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಚಿವ ಹೆಚ್.ಕೆ. ಪಾಟೀಲ್, ಕೃಷಿ ಭಾಗ್ಯ ಯೋಜನೆ ಮತ್ತೆ ಆರಂಭಿಸಲಾಗುವುದು. 2023 -24 ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕಿನಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಜಾರಿಗೆ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೃಷಿ ಭಾಗ್ಯ ಯೋಜನೆ ಮತ್ತೆ ಪ್ರಾರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ಕೃಷಿ ಭಾಗ್ಯ ಯೋಜನೆಯನ್ನು 24 ಜಿಲ್ಲೆಗಳಲ್ಲಿ ಆರಂಭಿಸಲಾಗುವುದು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ನಿವೃತ್ತಿ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಕಾತಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ಮುಖ್ಯಮಂತ್ರಿಗಳಿಗೆ ಕ್ಯಾಬಿನೆಟ್ ಪರಮಾಧಿಕಾರ ನೀಡಿದೆ ಎಂದು ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...