
ಶಿವಮೊಗ್ಗ: ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕ್ಯಾಸನೂರು ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಸುರೇಶ್ ಎಂಬುವರ ಪುತ್ರ ಸಾತ್ವಿಕ್(14) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಶಾಲೆಗೆ ರಜೆ ಇದ್ದ ಹಿನ್ನೆಲೆ ಜಾನುವಾರು ಮೇಯಿಸಲು ತೆರಳಿದ್ದ ವೇಳೆ ಫಾತಿಮಾ ಎಂಬವರ ಜಮೀನಿನಲ್ಲಿದ್ದ ಕೃಷಿಹೊಂಡಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹ ಹೊರ ತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಚನ್ನಳ್ಳಿ ಗ್ರಾಮದಲ್ಲಿ ಐದು ದಿನಗಳ ಹಿಂದೆ ಕೃಷಿಹೊಂಡಕ್ಕೆ ಬಿದ್ದು ಬಾಲಕ ಹಾಗೂ ಯುವಕ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮೊದಲೇ ಸೊರದಲ್ಲಿ ಬಾಲಕ ಕೃಷಿ ಹೊಂಡಕ್ಕೆ ಬಿದ್ದು, ಮೃತಪಟ್ಟಿದ್ದಾನೆ.