ಬೆಂಗಳೂರು: ರಾಜ್ಯ ಸರ್ಕಾರ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ 4000 ರೂ. ನೀಡುವ ಕೃಷಿ ಸಮ್ಮಾನ್ ಯೋಜನೆ ಮುಂದುವರೆಸಬೇಕು ಎಂದು ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.
ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್ ನಲ್ಲಿ ಕೃಷಿ ಸಮ್ಮಾನ್ ಯೋಜನೆ ಅಡಿ ಸಣ್ಣ, ಅತಿ ಸಣ್ಣ ರೈತರಿಗೆ 4000 ರೂ. ನೀಡುವ ಯಾವುದೇ ಪ್ರಸ್ತಾಪವಿಲ್ಲ. ರೈತರ ವಿಚಾರದಲ್ಲಿ ರಾಜಕೀಯ ಮಾಡದೆ ಯೋಜನೆ ಮುಂದುವರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರ ರೈತರಿಗೆ ವಾರ್ಷಿಕ 6,000 ರೂ. ನೀಡುತ್ತಿದೆ. ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಇದೇ ಯೋಜನೆ ಅಡಿ 4,000 ರೂ. ನೀಡುತ್ತಿತ್ತು. ಅದನ್ನು ಮುಂದುವರೆಸುವ ಬಗ್ಗೆ ಪ್ರಸ್ತಾಪವಿಲ್ಲ. ರಾಜ್ಯದಲ್ಲಿ ಮುಂಗಾರು ವೈಫಲ್ಯದಿಂದಾಗಿ ರೈತರು ಸಂಕಷ್ಟದಲ್ಲಿದ್ದು, 4000 ರೂ. ನೀಡುವುದನ್ನು ಮುಂದುವರೆಸಬೇಕೆಂದು ಆಗ್ರಹಿಸಿದ್ದಾರೆ.