
ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆ ಹೊಂದಿದ್ದರು. ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಒಂದು ವಾರದೊಳಗೆ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. 17 ಲಕ್ಷದ 9 ಸಾವಿರ ರೈತ ಕುಟುಂಬಗಳಿಗೆ ಜೀವನೋಪಾಯ ಪರಿಹಾರ ನೀಡಲಾಗುವುದು. 2800 ರೂ. ಅಥವಾ 3000 ರೂ. ಬರಬಹುದು. ಇದು ಜೀವನೋಪಾಯ ನಷ್ಟದ ಪರಿಹಾರವಾಗಿದ್ದು, ಸಣ್ಣ, ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ ಎಂದು ತಿಳಿಸಿದ್ದಾರೆ.