ತುಮಕೂರು: ಬಗರ್ ಹುಕುಂ ಸಾಗುವಳಿದಾರರಿಗೆ ಜಮೀನು ಮಂಜೂರು ಮಾಡುವ ಸಲುವಾಗಿ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ತುಮಕೂರಿನಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಮಾತನಾಡಿ, ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಅರ್ಹರಿಗೆ ಮಾತ್ರ ಜಮೀನು ಮಂಜೂರು ಮಾಡುವ ಉದ್ದೇಶದಿಂದ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಅಪ್ಲಿಕೇಶನ್ ಜೊತೆಗೆ ಹಿಂದಿನ 5 ವರ್ಷಗಳಲ್ಲಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗುವಂತೆ ಮಾಡಲಾಗುವುದು. ಅದನ್ನು ಪರಿಶೀಲಿಸಿ ಅರ್ಹರಿಗೆ ಜಮೀನು ಮಂಜೂರು ಮಾಡಲು ಅನುಕೂಲವಾಗಲಿದೆ. ಕೆಲವರು ಸಾಗುವಳಿ ಮಾಡದೆ ಸುಳ್ಳು ಮಾಹಿತಿ ನೀಡಿ ಅರ್ಜಿ ಹಾಕಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.