
ಬಗರ್‌ಹುಕುಂ ಮಂಜೂರಾತಿ ಪಡೆದ ರೈತರಿಗೆ ಡಿಜಿಟಲ್ ಸಾಗುವಳಿ ಚೀಟಿ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಇದರಿಂದ ದಾಖಲೆಗಳನ್ನು ಕಳೆದುಕೊಳ್ಳುವ, ಕಚೇರಿಗಳಿಗೆ ಅಲೆದಾಡುವ ತಾಪತ್ರಯ ತಪ್ಪಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಸಾಗುವಳಿ ಮಂಜೂರಾತಿ ನೀಡುವ ಎಲ್ಲ ರೈತರಿಗೂ ಡಿಜಿಟಲ್ ಸಾಗುವಳಿ ಪತ್ರ ನೀಡಲಾಗುವುದು. ಕಳೆದ ಕೆಲವು ದಶಕಗಳಿಂದ ಸರ್ಕಾರದ ವಿವಿಧ ಯೋಜನೆಗಳಡಿ ರೈತರಿಗೆ ಜಮೀನು ಮಂಜೂರಾಗಿದೆ. ಆದರೆ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಇದರಿಂದ ಪೋಡಿಯಾಗದೆ ರೈತರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಈಗ ಜಮೀನಿಗೆ ಹಕ್ಕುಪತ್ರ ನೀಡುವ ಜೊತೆಗೆ ತಹಶೀಲ್ದಾರ್ ಅವರೇ ನೋಂದಣಿ ಮಾಡಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.