alex Certify BREAKING: ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ನಷ್ಟ ಪರಿಹಾರ ಪಾವತಿ: ಮನೆ ಹಾನಿಯಾದವರಿಗೆ ಪರಿಹಾರದ ಜತೆ ಹೊಸ ಮನೆ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ನಷ್ಟ ಪರಿಹಾರ ಪಾವತಿ: ಮನೆ ಹಾನಿಯಾದವರಿಗೆ ಪರಿಹಾರದ ಜತೆ ಹೊಸ ಮನೆ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ. 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು, ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ 15 ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದರು.

ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಸಂಗೇನಹಳ್ಳಿ ಕೆರೆ ಕೋಡಿ ವೀಕ್ಷಣೆ, ಹಿರೇಮಲ್ಲನಹೊಳೆಯಲ್ಲಿ ಹಾನಿಯಾದ ಮನೆ ವೀಕ್ಷಣೆ ಮತ್ತು ಬೆಳೆ ವೀಕ್ಷಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದ್ದು, ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ವರದಿ ನಿರೀಕ್ಷಿಸಲಾಗಿದ್ದು, ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ನಂತರ ಬೆಳೆ ನಷ್ಟದ ನಿಖರತೆ ತಿಳಿಯಲಿದೆ. ಇದಕ್ಕಾಗಿಯೇ ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ ಎಂದರು.

ಹಿಂಗಾರು ಹಂಗಾಮಿನಲ್ಲಿ 21 ಜನರ ಪ್ರಾಣಹಾನಿಯಾಗಿದ್ದು, ಇದರಲ್ಲಿ 9 ಜನರು ಸಿಡಿಲಿನಿಂದ ಮರಣ ಹೊಂದಿದ್ದರೆ, 6 ಜನರು ಮನೆ ಕುಸಿತದಿಂದ ಸಾವನ್ನಪ್ಪಿದ್ದಾರೆ. 3 ರಿಂದ 4 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮುಂಗಾರು ಸೇರಿದಂತೆ ಇಲ್ಲಿಯವರೆಗೆ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದರು.

ಮುಂಗಾರು ಹಂಗಾಮಿನಲ್ಲಿ 2589 ಮತ್ತು ಹಿಂಗಾರಿನಲ್ಲಿ 121 ಮನೆಗಳು ಬಿದ್ದು ಹೋಗಿವೆ, ಇವರಿಗೆ ಮನೆ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲಾಗುತ್ತದೆ. ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ ಮನೆ ಬಿದ್ದು, ಹೋಗಿದ್ದಲ್ಲಿ ಎಸ್.ಡಿ.ಆರ್.ಎಫ್ ನಡಿ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ. ಮುಂಗಾರು ಹಂಗಾಮಿನಲ್ಲಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದ್ದು, ಈಗಾಗಲೇ ಪರಿಹಾರ ನೀಡಲಾಗಿದ್ದು, ಕೆಲವೇ ದಿನಗಳಲ್ಲಿ ಮುಂಗಾರು ಬೆಳೆ ನಷ್ಟ ಪರಿಹಾರ ಪಾವತಿ ಪೂರ್ಣವಾಗಲಿದೆ ಎಂದರು.

666 ಕೋಟಿ ರೂ. ಲಭ್ಯ:

ಬೆಳೆಹಾನಿ, ಜೀವಹಾನಿ ಹಾಗೂ ಮನೆ ಬಿದ್ದುಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರರ ಖಾತೆಗಳಲ್ಲಿ 666 ಕೋಟಿ ರೂ.ನಷ್ಟು ಹಣವಿದ್ದು, ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಕಷ್ಟ ಕಾಲದಲ್ಲಿ ಪರಿಹಾರ ನೀಡಿದಲ್ಲಿ ಉಪಯುಕ್ತವಾಗಲಿದೆ ಎಂದು ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ದಾವಣಗೆರೆ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಶೇ 190 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಅನೇಕ ಕೆರೆ, ಕಟ್ಟೆಗಳು ತುಂಬಿವೆ ಮತ್ತು ಬೆಳೆ ನಷ್ಟ ಉಂಟಾಗಿದೆ. ಬೆಳೆ ನಷ್ಟವಾದ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಸಚಿವರೊಂದಿಗೆ ಸಮೀಕ್ಷೆ ವೇಳೆ ಶಾಸಕರಾದ ಬಿ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಸೇರಿದಂತೆ ಕಂದಾಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Získajte užitočné tipy a triky pre každodenný život, skvelé recepty a užitočné články o záhradkárstve. Objavte nové spôsoby, ako využiť svoj čas a zlepšiť svoj životný štýl s našimi informáciami. Buďte pripravení na všetky výzvy, ktoré vám prinesie každý deň a naučte sa, ako si uľahčiť každodenné povinnosti. So všetkými našimi tipmi budete mať vždy pod kontrolou svoj domáci a záhradkársky život. Nezabudnuteľná zmrzlinová výzva: len niektorí Vyhľadávanie ihly v kopy sena: Neúprosná úloha Nájdi myš za 8 sekúnd: hádanka pre ľudí s Len géniové by našli mačku za 8 sekúnd: najlepší 'Rozlúštenie hádanky: Nájsť lano priviazané k psovi za 8 Rýchly génius: Hľadanie „divného“ Obľúbené lifestylové tipy, kuchárske triky a užitočné články o záhradkárskej téme - to všetko nájdete na našej stránke plnej užitočných informácií. Urobte si život jednoduchším pomocou našich tipov a trikov, objavte nové recepty a naučte sa nové veci o pestovaní zeleniny na vašej záhrade. Buďte informovaní a inšpirovaní s naším obsahom!