ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲಾಗಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ದೂರು ನೀಡಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದಲ್ಲಿನ ಅಕ್ರಮ ಜಮೀನು ವ್ಯವಹಾರದಲ್ಲಿ ಸಚಿವ ಕೃಷ್ಣ ಬೈರೇಗೌಡ ಪಾತ್ರವಿದೆ. ಕಂದಾಯ ಇಲಾಖೆಯಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸರ್ಕಾರ ವಿಫಲವಾಗಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.