alex Certify ‘ಕೃಷ್ಣಂ ಪ್ರಣಯಸಖಿ’ ಚಿತ್ರದ ಸಾಂಗ್ ಪ್ರೊಮೋ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೃಷ್ಣಂ ಪ್ರಣಯಸಖಿ’ ಚಿತ್ರದ ಸಾಂಗ್ ಪ್ರೊಮೋ ರಿಲೀಸ್

ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷಿತ ‘ಕೃಷ್ಣಂ ಪ್ರಣಯಸಖಿ’ ಚಿತ್ರದ ”ದ್ವಾಪರ” ಎಂಬ ಲಿರಿಕಲ್ ಹಾಡು ನಾಳೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದ್ದು, ಇದರ ಪ್ರೊಮೋ ಒಂದನ್ನು ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ. ಜಸ್ ಕರನ್ ಸಿಂಗ್ ಈ ಹಾಡಿಗೆ ಧ್ವನಿಯಾಗಿದ್ದು, ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಡಾ” ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.

ಶ್ರೀನಿವಾಸ್ ರಾಜು ರಚಿಸಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ಗೆ ಜೋಡಿಯಾಗಿ ಮಾಳವಿಕಾ ನಾಯರ್ ಅಭಿನಯಿಸಿದ್ದು, ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡಿದ್ದಾರೆ. KM ಪ್ರಕಾಶ್ ಸಂಕಲನ, ಮತ್ತು  ವೆಂಕಟ್ ರಾಮ ಪ್ರಸಾದ್ ಛಾಯಾಗ್ರಾಹಣವಿದ್ದು, ಎವಿ ಶಿವ ಸಾಯಿ, ಹಾಗೂ ವಿಜಯ್ ಈಶ್ವರ್ ಸಂಭಾಷಣೆ ಬರೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...