ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಸಂಸದೆ ಸುಮಲತಾ ಅವರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ಇಂತಹ ಸಂಸದೆ ಹಿಂದೆ ಬಂದಿಲ್ಲ. ಮುಂದೆಯೂ ಬರೋದಿಲ್ಲವೆಂದು ವ್ಯಂಗ್ಯವಾಡಿದ್ದಾರೆ.
ಕೆ.ಆರ್.ಎಸ್. ನಲ್ಲಿ ನೀರು ಸೋರಿಕೆಯಾಗುತ್ತಿದೆ ಎಂಬ ಸಂಸದೆ ಸುಮಲತಾರ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ. ಕೆ.ಆರ್.ಎಸ್. ರಕ್ಷಣೆಯನ್ನು ಅವರೇ ಹೊತ್ತುಕೊಂಡಂತೆ ಕಾಣುತ್ತಿದೆ. ಹೀಗಾಗಿ ಕೆ.ಆರ್.ಎಸ್. ಬಾಗಿಲಿಗೆ ಸುಮಲತಾರನ್ನೇ ಮಲಗಿಸಿದರೆ ಇದು ನಿಲ್ಲಬಹುದೇನೋ ಎಂದಿದ್ದಾರೆ.
ಏನೋ ಅನುಕಂಪದ ಅಲೆ ಮೇಲೆ ಅವರು ಮಂಡ್ಯ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಈಗಲಾದರೂ ಅವರು ಕೆಲಸ ಮಾಡದಿದ್ದರೆ ಮುಂದಿನ ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.